ಹುನಗುಂದ: ಕೂಡಲಸಂಗಮದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ, ಖಾಸಗಿ ವಾಹನಗಳ ನಿಲುಗಡೆಗೆ ನಿಲ್ದಾಣ ನಿರ್ಮಿಸಲು ಮನವಿ
ಖಾಸಗಿ ವಾಹನಗಳ ನಿಲುಗಡೆಗೆ ನಿಲ್ದಾಣವನ್ನು ನಿರ್ಮಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಶಿವರಾಮೇಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಅವರ ನೇತೃತ್ವದಲ್ಲಿ ಸುಕ್ಷೇತ್ರ ಕೂಡಲಸಂಗಮಕ್ಕೆ ಆಗಮಿಸುವ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿರುವ ಆಟೋ ಚಾಲಕರು ಹಾಗೂ ನಾಲ್ಕು ಚಕ್ರದ ವಾಹನ ಚಾಲಕರ ವಾಹನಗಳ ನಿಲುಗಡೆಗೆ ನಿಲ್ದಾಣ ನಿರ್ಮಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಕರವೇ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.