ರಾಜ್ಯ ಮತ್ತು ದೇಶದಲ್ಲಿ ನ್ಯಾಯಾಂಗ ಮತ್ತು ಶಾಸಕಾಂಗಕ್ಕಿಂತ ಹೆಚ್ಚು ಒತ್ತಡದಲ್ಲಿ ಕೆಲಸ ಮಾಡುವುದು ಅಂದರೆ ಕಾರ್ಯಂಗದ ಸಿಬ್ಬಂದಿಗಳು ಎಂದು ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಹೇಳಿದರು. ಕೃಷಿ ವಿಶ್ವವಿದ್ಯಾಲಯದ ಸಭಂಗಣದಲ್ಲಿ ಆಯೋಜಿಸಲಾಗಿದ್ದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಗಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಆರ್ಟಿಐ ಬಂದ ನಂತರ ಕಾರ್ಯಾಂಗದ ಸಿಬ್ಬಂದಿಗಳು ಹೆಚ್ಚು ಒತ್ತಡದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಪ್ರತಿನಿತ್ಯ ಪರೀಕ್ಷೆ ಬರೆಯಲು ಹೋದಂತೆ ಸಿದ್ದರಾಗಿ ಹೋಗುವ ಪರಿಸ್ಥಿತಿ ಇದೆ ಎಂದು ಹೇಳಿದರು.