ಹಾವೇರಿ: ಹಾವೇರಿ ನವದುರ್ಗೆಯರ ದೇವಸ್ಥಾನದಲ್ಲಿ ವಿಜಯದಶಮಿ ಹಬ್ಬದ ಸಂಭ್ರಮ
Haveri, Haveri | Oct 2, 2025 ಹಾವೇತಿ ಜಿಲ್ಲೆಯಾದ್ಯಂತ ವಿಜಯದಶಮಿ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಹಾವೇರಿಯ ನವದುರ್ಗೆಯರ ದೇವಸ್ಥಾನ ಪುಷ್ಪಗಳಿಂದ ಕಂಗೊಳಿಸುತ್ತಿದೆ. ನವರಾತ್ರಿಯ ಒಂದೊಂದು ದಿನ ಒಂದೊಂದು ದೇವತೆಗೆ ಪೂಜೆ ಸಲ್ಲಿಸಿದರೆ. ವಿಜಯದಶಮಿಯ ದಿನ ಒಂಭತ್ತು ದುರ್ಗೆಯರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಈ ಅಲಂಕಾರ ಪೂಜೆ ಕಣ್ತುಂಬಿಕೊಳ್ಳಲು ಭಕ್ತರ ದಂಡೇ ಆಗಮಿಸುತ್ತದೆ.