ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಕಿಟ್ ಸ್ಥಗಿತ ನಗರದಲ್ಲಿ ಶಾಂತವೇರಿ ಗೋಪಾಲಗೌಡ ಟ್ರಸ್ಟ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹದಿಹರೆದ ವಿದ್ಯಾರ್ಥಿನಿಯರಿಗೆ ಶುಚಿ ಯೋಜನೆ ಅಡಿಯಲ್ಲಿ ನೀಡುವ ಸ್ಯಾನಿಟರಿ ಪ್ಯಾಡ್ ಕಿಟ್ ಗಳನ್ನು ತಗಿತಗೊಳಿಸಿರುವುದನ್ನು ಖಂಡಿಸಿ ಯೋಜನೆಯನ್ನು ಪುನಃ ಜಾರಿಗೊಳಿಸುವಂತೆ ಆಗ್ರಹಿಸಿ ಬುಧವಾರ ಶಿವಮೊಗ್ಗ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ನ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನ ಸಲ್ಲಿಸಿದರು.