ಹಾವೇರಿ: ಸರಿಯಾದ ಸಮಯಕ್ಕೆ ಬಸ್ ಇಲ್ಲದೆ ತಿಮ್ಮನಹಳ್ಳಿ ವಿದ್ಯಾರ್ಥಿಗಳ ಪ್ರತಿಭಟನೆ
Haveri, Haveri | Nov 12, 2026 ಹಾವೇರಿಯ ತಿಮ್ಮನಹಳ್ಳಿ ಗ್ರಾಮದಲ್ಲಿ ಬಸ್ ಸೌಲಭ್ಯ ಸರಿಯಾಗಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ತಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದು, SFI ಸಂಘಟನೆ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.