ಗದಗ: ಹುಲಕೋಟಿಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
Gadag, Gadag | Jun 4, 2025 ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದೆ. ಭಾರತೀಯ ದ್ವಿದಳ ಧಾನ್ಯಗಳ ಸಂಶೋಧನಾ ಸಂಸ್ಥೆ, ಧಾರವಾಡದ ವಿಜ್ಞಾನಿಗಳು, ಕರ್ನಾಟಕ ಸರಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಇದ್ದರು.