ಅಂಕೋಲಾದಲ್ಲಿರುವ ಸತ್ಯಾಗ್ರಹ ಸ್ಮಾರಕ ಭವನಕ್ಕೆ ಸೌಂಡ್, ಲೈಟ್, ಫ್ಯಾನ್ಗಳು, ಶೌಚಾಲಯಗಳ ದುರಸ್ತಿ, ಗ್ರಂಥಾಲಯ ದುರಸ್ತಿ ಹಾಗೂ ಕಟ್ಟಡಕ್ಕೆ ಪೈಟಿಂಗ್ ಸೇರಿದಂತೆ ಎಲ್ಲಾ ರೀತಿಯ ಅಗತ್ಯವಿರುವ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಬುಧವಾರ ಮಧ್ಯಾಹ್ನ 3.30ಕ್ಕೆ ಅಂಕೋಲಾದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.