ಕಲಬುರಗಿ: ಬೆಳೆ ವಿಮೆ ಹಣ ಬಿಡುಗಡೆಗೆ ಆಗ್ರಹಿಸಿ ನಗರದಲ್ಲಿ ರೈತರ ಬೃಹತ್ ಪ್ರತಿಭಟನೆ
ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ರೈತರು ಕಂಗಾಲಾಗಿದ್ದು ಸರ್ಕಾರ ಕೂಡಲೇ ಬೆಳೆ ಪರಿಹಾರ ಹಾಗೂ ವಿಮೆ ಹಣ ಬಿಡುಗಡೆ ಮಾಡುವಂತೆ ಅಗ್ರಹಿಸಿದರು. ಇನ್ಮು ರೈತರ ಹೋರಾಟದ ಸ್ಥಳಕ್ಕೆ ಸಿಎಂ ಭೇಟಿ ನೀಡಲಿಲ್ಲ ಎಂಬ ಕಾರಣಕ್ಕೆ ರೈತ ಮುಖಂಡ ಅವ್ವಣ್ಣಾ ಮ್ಯಾಕೆರಿ ಸೇರಿದಂತೆ ಅನೇಕ ರೈತರು ಬುಧವಾರ 2 ಗಂಟೆಗೆ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..