ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೃಷ್ಣರಾಜಪುರ ಹಾಗೂ ಹ್ಯುಮಾನಿಟಿ ಕಾಲ್ಸ್ ಬೈಕ್ ರೈಡರ್ಸ್ ರವರ ಸಹಯೋಗದೊಂದಿಗೆ ಶನಿವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ನಿಮಿತ್ತ ಬೈಕ್ ರ್ಯಾಲಿ ಮೂಲಕ ಜಾಗೃತಿ ಜಾಥಾ ನಡೆಸಲಾಯ್ತು. ಬೆಂಗಳೂರು ಪೂರ್ವ ನಗರಪಾಲಿಕೆ ಅಪರ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಮತ್ತು ಜಂಟಿ ಆಯುಕ್ತರಾದ ಡಾ. ಸುಧಾ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಆರೋಗ್ಯ ಸೇವೆಗಳು ದೇಶದ ಕಟ್ಟ ಕಡೆಯ ನಾಗರೀಕರಿಗೂ ತಲುಪುವಂತೆ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.