ಅಂಕೋಲ: ಬೇಲೇಕೇರಿ ಬಂದರಿನಲ್ಲಿ ಲಂಗರು ಹಾಕಿದ ಬೋಟ ಮುಳುಗಡೆ ಲಕ್ಷಾಂತರ ರೂ. ಹಾನಿ
ಅಂಕೋಲಾ ತಾಲೂಕಿನ ಬೇಲೇಕೇರಿ ಬಂದರು ಪ್ರದೇಶದಲ್ಲಿ ಲಂಗರು ಹಾಕಿ ನಿಂತಿದ್ದ ಮೀನುಗಾರಿಕಾ ಬೋಟ್ ಮುಳುಗಿದ ಘಟನೆ ನಡೆದಿದ್ದು ಶನಿವಾರ 6.45ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ದಿನದ ಹಿಂದಷ್ಟೆ ಇದೇ ಪ್ರದೇಶದಲ್ಲಿ ಮತ್ತೊಂದು ಬೋಟ ಮುಳುಗಿಡೆಯಾಗಿತ್ತು. ಈಗ ಇನ್ನೊಂದು ಬೋಟ್ ಮುಳುಗಿದ ಘಟನೆ ಮೀನುಗಾರರಲ್ಲಿ ಆತಂಕ ಮೂಡಿಸಿದೆ. ಘಟನೆಯಿಂದ ಶ್ರೀಕಾಂತ ತಾಂಡೇಲ ಅವರಿಗೆ ಸೇರಿದ್ದ ಶ್ರೀ ದುರ್ಗಾಪ್ರಸಾದ ಪರ್ಶೀಯನ್ ಬೋಟ್ ಇದಾಗಿದ್ದು ಇವರಿಗೆ ಲಕ್ಷಾಂತರ ರೂ. ಹಾನಿಯಾಗಿದೆ