ಗುಬ್ಬಿ: ಗುಬ್ಬಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಲೋಕಾಯುಕ್ತರು
Gubbi, Tumakuru | Sep 24, 2025 ಗುಬ್ಬಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತರ ಸಾರ್ವಜನಿಕ ಕುಂದುಕೊರತೆ ಸಭೆ ನಡೆಯಿತು. ಸಾರ್ವಜನಿಕರಿಂದ ಸುಮಾರು 17 ಸಮಸ್ಯೆಗಳ ಬಗ್ಗೆ ದೂರುಗಳು ದಾಖಲಾಗಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಲೋಕಾಯುಕ್ತ ಅಧಿಕಾರಿ ಲಕ್ಷ್ಮಿನಾರಾಯಣ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಈ ಸಭೆಯಲ್ಲಿ ತಹಶೀಲ್ದಾರ್ ಬಿ. ಆರತಿ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು.