ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಚಾಮರಾಜನಗರ ಅಮೃತ ರೈಲು ನಿಲ್ದಾಣ ಉದ್ಘಾಟನೆ.
▪️ಅಮೃತ ಭಾರತ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ ‘ಚಾಮರಾಜನಗರ ಅಮೃತ ನಿಲ್ದಾಣ’ವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು.
▪️ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ವ್ಯವಸ್ಥೆ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವ ಮಹತ್ವದ ಉಪಕ್ರಮವಾಗಿ ಬೆಂಗಳೂರಿನ ಐಐಎಂ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಭಾರತದ ಪ್ರಧಾನಮಂತ್ರಿಗಳು ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವ ಜೊತೆಗೆ ವಿವಿಧ ರೈಲ್ವೆ ಯೋಜನೆಗಳನ್ನು ರಿಮೋಟ್ ಬಟನ್ ಒತ್ತುವ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು.
▪️ಈ ಪೈಕಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕರ್ನಾಟಕದ ನಾಲ್ಕು ಪ್ರಮುಖ ರೈಲು ನಿಲ್ದಾಣಗಳಾದ ಚಾಮರಾಜನಗರ, ಸಕಲೇಶಪುರ, ಚಿಕ್ಕಮಗಳೂರು ನಿಲ್ದಾಣಗಳ ಪುನರಾಭಿವೃದ್ಧಿ ಕಾಮಗಾರಿಗಳು ಹಾಗೂ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿಗಳು ಸೇರಿವೆ.
▪️ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿರುವ ಈ ಯೋಜನೆಗಳಿಮದ ಪ್ರಯಾಣಿಕರಿಗೆ ಆಧುನಿಕ ಸೌಲಭ್ಯಗಳು, ರೈಲು ಕಾರ್ಯಾಚರಣೆಯ ದಕ್ಷತೆ ಮತ್ತು ರೈಲ್ವೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲಿದೆ. ಸುರಕ್ಷಿತ, ದಕ್ಷ, ಆಧುನಿಕ ಹಾಗೂ ಪ್ರಯಾಣಿಕ ಸ್ನೇಹಿ ರೈಲ್ವೆ ಸೇವೆಗಳನ್ನು ಒದಗಿಸುವ ಭಾರತೀಯ ರೈಲ್ವೆಯ ನಿರಂತರ ಬದ್ಧತೆಯನ್ನು ಈ ಕಾರ್ಯಕ್ರಮಗಳು ಪ್ರತಿಬಿಂಬಿಸಲಿವೆ.
▪️ನಗರದ ರೈಲು ನಿಲ್ದಾಣದಲ್ಲಿ ನಡೆದ ಸ್ಥಳೀಯ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ದೀಪ ಬೆಳಗಿಸಿ, ಪುನರಾಭಿವೃದ್ಧಿಗೊಂಡ ‘ಚಾಮರಾಜನಗರ ಅಮೃತ ನಿಲ್ದಾಣ’ ದ ನಾಮಫಲಕ ಅನಾವರಣಗೊಳಿಸಿದರು.
▪️ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ‘ಚಾಮರಾಜನಗರ ಅಮೃತ ನಿಲ್ದಾಣ’ ಉದ್ಘಾಟನೆಗೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಜಿಲ್ಲೆಯ ಆರ್ಥಿಕತೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನವಾಗಲಿದೆ. ಜಿಲ್ಲೆಯ ಧಾರ್ಮಿಕ ಕೇಂದ್ರಗಳು, ಪ್ರವಾಸಿ ತಾಣಗಳು ಹಾಗೂ ವನ್ಯಜೀವಿ ಅಭಯಾರಣ್ಯಗಳನ್ನು ಜನರು ವೀಕ್ಷಿಸಲು ಜಿಲ್ಲೆಗೆ ಉತ್ತಮ ರೈಲು ಸಂಪರ್ಕ ವ್ಯವಸ್ಥೆ ಅಗತ್ಯವಾಗಿದೆ. ಸ್ಥಳೀಯವಾಗಿಯೂ ಉದ್ಯೋಗ ಸೃಷ್ಠಿಯಾಗಲಿದೆ. ಜಿಲ್ಲಾಡಳಿತವು ರೈಲ್ವೆ ಇಲಾಖೆಗೆ ಅಗತ್ಯ ಸಹಕಾರ ನೀಡಲಿದೆ ಎಂದರು.
▪️ಮೈಸೂರು ರೈಲ್ವೆ ವಿಭಾಗೀಯ ವ್ಯವಸ್ಥಾಪಕರಾದ ಶಿರೀಶ್ ಸದಾಶಿವ ಕಾಂಭ್ಳೆ ಅವರು ಮಾತನಾಡಿ ಚಾಮರಾಜನಗರ ಜಿಲ್ಲೆಯ ಅಭಿವೃದ್ದಿಯ ಪಯಣದಲ್ಲಿ ಅಮೃತ ನಿಲ್ದಾಣ ಯೋಜನೆಯು ಐತಿಹಾಸಿಕ ಮೈಲಿಗಲ್ಲಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ ತಂಗುದಾಣ, ಫ್ಲಾಟ್ಫಾರಂ ವಿಸ್ತರಣೆ, ಉತ್ತಮ ವಿನ್ಯಾಸದ ಪ್ರವೇಶದ್ವಾರ, ಸಿಸಿ ಟಿವಿ ಅಳವಡಿಕೆ ಹಾಗೂ ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಈ ರೈಲು ನಿಲ್ದಾಣದಲ್ಲಿ ಅಭಿವೃದ್ದಿಪಡಿಸಲಾಗಿದೆ ಎಂದು ತಿಳಿಸಿದರು.
▪️ಆರಂಭದಲ್ಲಿ ನಗರದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
▪️ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ರೈಲ್ವೆ ಇಲಾಖೆಯ ಡಿಆರ್ಯುಸಿಸಿ ವಿ. ಪ್ರಭಾಕರ್ ಸೇರಿದಂತೆ ರೈಲ್ವೆ ಇಲಾಖೆಯ ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Yadgir, Yadgir | Nov 13, 2026