ಬೆಂಗಳೂರು ಉತ್ತರ: ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ: ನಗರದಲ್ಲಿ ಡಿಸಿಎಂ
ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಕಷ್ಟ ಕಾಲದಲ್ಲಿ ಅವರ ಪಾಲಿನ ನೀರನ್ನು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ ಸುಪ್ರೀಂ ಕೋರ್ಟಿನ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಗುರುವಾರ ಸಂಜೆ 5 ಗಂಟೆಗೆ ಪ್ರತಿಕ್ರಿಯೆ ನೀಡಿದ ಅವರು, “ಕಾವೇರಿ ನೀರಿನ ಬಳಕೆಗಾಗಿ 'ನಮ್ಮ ನೀರು, ನಮ್ಮ ಹಕ್ಕು' ಎಂದು ಮೇಕೆದಾಟಿನಿಂದ ಹೆಜ್ಜೆ ಹಾಕಿ ನಾವು ಹೋರಾಟ ಮಾಡಿದೆವು. ನಂತರ ರಾಜ್ಯದ ಜನ ನಮ್ಮ ಕೈಗೆ ಅಧಿಕಾರ ನೀಡಿದರು.