ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ನಸುಕಿನ ಮಂಜು, 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಸುಕಿನ ಮಂಜು ಆವರಿಸಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಡಿ.13,ಶನಿವಾರ ಬೆಳಿಗ್ಗೆ 5ಕ್ಕೆ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ವರದಿಯಾಗಿದೆ. ನಸುಕಿನ ಮಂಜಿನ ಕಾರಣದಿಂದ ಬೆಳಿಗ್ಗೆ ವೇಳೆ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತಾಗಿದೆ. ಚಳಿಯಿಂದ ಜನರು ಬೆಳಗಿನ ಜಾವ ಮನೆಯಿಂದ ಹೊರಬರಲು ಹಿಂಜರಿಯುತ್ತಿರುವುದು ಕಂಡುಬಂದಿದೆ.ಚಳಿ ಮುಂದಿನ ಕೆಲ ದಿನಗಳು ಮುಂದುವರಿಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಮಾಹಿತಿಯಾಗಿದೆ..