ಶಿವಮೊಗ್ಗ: ಸಚಿವರ ಜನಸ್ಪಂದನಾ ಕಾರ್ಯಕ್ರಮದಿಂದ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯ ಮಕ್ಕಳಿಗೆ ಬಿಸಿ ಊಟ ಲಭ್ಯ
ಲಷ್ಕರ್ ಮೊಹಲ್ಲಾದ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿಯ ಶಾಲೆಯು ಒಂದು ವರ್ಷದ ಹಿಂದೆ ಸೋಮಿನ ಕೊಪ್ಪದ ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸಿದ್ದು ಅಲ್ಲಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟದ ವ್ಯವಸ್ಥೆ ಇರುವುದಿಲ್ಲ. ಈ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ನೀಡುವಂತೆ ಜೂನ್ 28ರಂದು ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪೋಷಕರು ಮನವಿ ಮಾಡಿದ್ದರು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಶಾಲಾ ಮಕ್ಕಳಿಗೆ ಬಿಸಿ ಊಟ ಕಲ್ಪಿಸುವಂತೆ ಸೂಚಿಸಿದ್ದರು. ಈ ಕುರಿತಾಗಿ ಮಕ್ಕಳಿಗೆ ಬಿಸಿ ಊಟ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಮೂಲಕ ಸೋಮವಾರ ತಿಳಿಸಿದ್ದಾರೆ.