ಬೀಳಗಿ: ಸಮತ್ರಸ್ತರ ಬೇಡಿಕೆಗಳಿಗೆ ಸ್ಪಂಧಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂನೆ, ಪಟ್ಟಣದಲ್ಲಿ ಶಾಸಕ ಜೆ.ಟಿ.ಪಾಟೀಲ್ ಹೇಳಿಕೆ
Bilgi, Bagalkot | Sep 17, 2025 ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಬೀಳಗಿ ಶಾಸಕ ಜೆ.ಟಿ.ಪಾಟೀಲ್ ಅವರು ಹೇಳಿದ್ದಾರೆ.ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಮಾತನಾಡಿರುವ ಅವರು, ರಾಜ್ಯ ಕ್ಯಾಬಿನೆಟ್ ನಲ್ಲಿ ಕೃಷ್ಣ ಮೇಲ್ದಂಡೆ ವಿಚಾರವಾಗಿ ಮಹತ್ವದ ನಿರ್ಧಾರವನ್ನಿ ತೆಗೆದುಕೊಳ್ಳಲಾಗಿದೆ.ಮೂರು ವರ್ಷದಲ್ಲಿ ಅಲಮಟ್ಟಿ ಯೋಜನೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದ್ದು ಸಿಎಂ ,ಡಿಸಿಎಂ,ಹಾಗೂ ಎಲ್ಲ ಸಚಿವರಿಗೆ ಸಂತ್ರಸ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.