ಮೊಳಕಾಲ್ಮುರು: ಚಳ್ಳಕೆರೆ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಗಳ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಹಿರೇಹಳ್ಳಿ ಬಳಿ ಹೆದ್ದಾರಿ ತಡೆದು ಪ್ರತಿಭಟನೆ
ಮೊಳಕಾಲ್ಮುರು:-ಚಳ್ಳಕೆರೆ ಮತ್ತು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಗಳ ಶಾಸಕರುಗಳಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹಿರೇಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಚಳ್ಳಕೆರೆ ಮತ್ತು ಮೊಳಕಾಲ್ಮೂರು ಕ್ಷೇತ್ರದ ಶಾಸಕರುಗಳಿಗೆ ಸಚಿವ ಸ್ಥಾನ ನೀಡಬೇಕು, ಸ್ವಾತಂತ್ರ್ಯ ಬಂದಾಗಿನಿಂದಲೂ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಣುವಲ್ಲಿ ನಿರ್ಲಕ್ಷಕ್ಕೆ ಒಳಗಾಗಿದ್ದು ರಾಜ್ಯದಲ್ಲಿಯೇ ಬರಗಾಲ ಪಟ್ಟಿಯಲ್ಲಿವೇ. ಆದ್ದರಿಂದಾಗಿ ಈ ತಾಲೂಕುಗಳ ಅಭಿವೃದ್ಧಿಗೆ ಸಚಿವ ಸ್ಥಾನ ಮುಖ್ಯವಾಗುತ್ತದೆ, ಎರಡು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹಾಗೂ ಹಿಂದುಳಿದ ಜನಾಂಗ ಹೆಚ್ಚು ಇದ್ದು ಪರಿಶಿಷ್ಟರ ಅಭಿವೃದ್ಧಿಗಾಗಿ ಮತ್ತು ಮೂಲಭೂ