ಕಾರವಾರ: ಕದ್ರಾ ಬಳಿ ಬೈಕಿಗೆ ಡಿಕ್ಕಿ ಹೊಡೆದ ಬಸ್ ಸವಾರನಿಗೆ ಗಂಭೀರ ಗಾಯ
ಚಾಲಕನ ನಿರ್ಲಕ್ಷ್ಯತನದಿಂದ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕದ್ರಾ ಬುಧವಾರ ಮಧ್ಯಾಹ್ನ 12ರ ಸುಮಾರ ನಡೆದಿರುವ ಮಾಹಿತಿ ಲಭ್ಯವಾಗಿದೆ. ಕೈಗಾದ ಎನ್ಪಿಸಿಐಎಲ್ನ ಸಿಬ್ಬಂದಿಗಳನ್ನು ಸಾಗಿಸುವ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಇಲ್ಲಿನ ರಮೇಶ ಸುಬ್ರಾಯ ಬಾಂದೇಕರ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ತಕ್ಷಣ ಗಾಯಾಳುವನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಕಾಲಿಗೆ ಗಂಭೀರ ಗಾಯವಾದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ರವಾನಿಸಲಾಗಿದ್ದು ಅಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆಯ ಕುರಿತು ಬಸ್ ಚಾಲಕನ ವಿರುದ್ಧ ಕದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ