ಅಬಕಾರಿ ಸಚಿವರು ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಬಾದಾಮಿ ಪಟ್ಟಣದ ಪ್ರಸಿದ್ಧ ಶಕ್ತಿದೇವತೆ ಶ್ರೀ ಬನಶಂಕರಿ ದೇವಿಯ ದರ್ಶನ ಪಡೆದರು.ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಸಚಿವರು ಆಗಮಿಸಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿದರು ಮತ್ತು ಆಶೀರ್ವಾದ ಪಡೆದರು. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ಜನತೆಯ ಸುಖ-ಶಾಂತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಬಾಗಲಕೋಟ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ, ಕಾಂಗ್ರೆಸ್ ಹಿರಿಯ ಮುಖಂಡರು ಸಾಥ್ ನೀಡಿದರು.