ರಾಯಚೂರು: ಮಂತ್ರಾಲಯದ ರಾಘವೇಂದ್ರ ಶ್ರೀಗಳ ಮಠದಲ್ಲಿ ಸಂಜೆಯವರೆಗೆ ನಡೆದ ಹುಂಡಿ ಎಣಿಕೆ ಕಾರ್ಯ
ರಾಯಚೂರು ಗ್ರಾಮೀಣದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಸಂಜೆ ಅವರಿಗೆ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಯಿತು. ಬೆಳಗಿಂದ ಆರಂಭಗೊಂಡ ಹುಂಡಿ ಎಣಿಕೆ ಕಾರ್ಯದಲ್ಲಿ ಶ್ರೀಮಠದ ಸಿಬ್ಬಂದಿಗಳು ಭಜನಾ ಮಂಡಳಿಯ ಮಹಿಳೆಯರು ಸೇರಿದಂತೆ ಅನೇಕರು ಭಾಗವಹಿಸಿ ಉಂಡಿ ಎಣಿಕೆ ಕಾರ್ಯವನ್ನು ನಡೆಸಿದ್ದಾರೆ ಎಂದು ಮಠದ ವ್ಯವಸ್ಥಾಪಕರಾದ ಶ್ರೀನಿವಾಸ್ ರಾವ್ ಅವರು ಮಾಹಿತಿ ನೀಡಿದ್ದಾರೆ. ಆಗಸ್ಟ್ ಮತ್ತು ಸಪ್ಟೆಂಬರ್ ತಿಂಗಳ ಹುಂಡಿ ಎಣಿಕೆ ಕಾರ್ಯ ನಡೆದಿದ್ದು ನಿಖರವಾಗಿ ಕಾಣಿಕೆ ಹಣ ಎಷ್ಟು ಜಮಾ ಆಗಿದೆ ಅನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.