ತರೀಕೆರೆ: ಕೇವಲ ಆಸ್ಪತ್ರೆ ಕಟ್ಟಡ ಉದ್ಘಾಟನೆಯಾದರೆ ಸಾಲದು : ಲಕ್ಕವಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ.!
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ 30 ಹಾಸಿಗೆಯ ಸಾಮರ್ಥ್ಯ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೇವಲ ಆಸ್ಪತ್ರೆಯ ಕಟ್ಟಡ ಉದ್ಘಾಟನೆಯಾದರೆ ಸಾಲದು ಅಗತ್ಯವಾಗಿ ಅದಕ್ಕೆ ಬೇಕಾಗಿರುವ ಸಲಕರಣೆಗಳು ವೈದ್ಯರು, ತಾಂತ್ರಿಕ ಸಿಬ್ಬಂದಿ, ಹಾಗೂ ಇತರ ವೈದ್ಯಕೀಯ ಸಿಬ್ಬಂದಿಯ ಅವಶ್ಯಕತೆ ಇದ್ದು ಇಲಾಖೆಯಿಂದ ಸಾಧ್ಯವಾಗುವ ಎಲ್ಲ ಕ್ರಮ ಕೈಗೊಂಡು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.