ಕಾರವಾರ: ನಗರದ ಡಿಸಿ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸೋಮವಾರ ಮಧ್ಯಾಹ್ನ 12ಕ್ಕೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪಷ್ಪ ನಮನ ಸಲ್ಲಿಸಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಅಂಕೋಲಾ ಪಿ.ಎಂ.ಪದವಿ ಪೂರ್ವ ಕಾಲೇಜು ಉಪನ್ಯಾಸಕ ಉಲ್ಲಾಸ್ಶ್ಯಾಮ್ ಹುದ್ಧಾರ ಉಪನ್ಯಾಸ ನೀಡಿದರು. ಜಿಪಂ ಸಿಇಒ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಕೆ ಉಮೇಶ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು