ನವೆಂಬರ್ 26 ರಂದು ಚಿತ್ರದುರ್ಗದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೋಮವಾರ ಸಂಜೆ 5 ಗಂಟೆಗೆ ಈ ಬಗ್ಗೆ ಜಿಲ್ಲಾಡಳಿತ ಪ್ರಕಟಣೆ ನೀಡಿದೆ. ಇನ್ನೂ ನ.26 ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಬಳಿ ಇರುವ ಲಿಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಂವಿಧಾನ ದಿನಾಚರಣೆ ಅಂಗವಾಗಿ ನಗರದ ವಿವಿಧ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.