ಕುರುಗೋಡು ಪಟ್ಟಣದ ದೊಡ್ಡ ಬಸವೇಶ್ವರ ದೇವಸ್ಥಾನದ ಮುಂಭಾಗ ಸುಮಾರು 55 ರಿಂದ 60 ವರ್ಷದ ಮಹಿಳೆ ನ.26 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ತಿಳಿದಿರುವುದಿಲ್ಲ, ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಕುರುಗೋಡು ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಚಹರೆ: ಅಂದಾಜು 4.8 ಅಡಿ ಎತ್ತರ, ಕೋಲುಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಹಸಿರು ಬಣ್ಣದ ಸೀರೆ ಧರಿಸಿರುತ್ತಾಳೆ. ಕೆಂಪು ಬಣ್ಣದ ಹೊದಿಕೆ ಇರುತ್ತದೆ. ಎಡ ಕೈಗೆ ಹೂವಿನ ಅಚ್ಚೆ ಗುರುತು ಇರುತ್ತದೆ. ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಕುರುಗೋಡು ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಡಿ.6,ಶನಿವಾರ ಸಂಜೆ 6ಕ್ಕೆ ಪ್ರಕಟಣೆಯಲ್ಲಿ ಕೋರಿದ್ದಾರೆ.