ಬೆಂಗಳೂರಿನ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಯೋಜಿಸಿದ **“2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ”**ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಪ್ರಶಸ್ತಿ ವಿಜೇತ ಗಣ್ಯರನ್ನು ಸನ್ಮಾನಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಭೈರತಿ ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಮಂಥರ್ ಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ