ಕೋಲಾರ: ಕೋಲಾರ ಜಿಲ್ಲೆಗೆ ಮಂತ್ರಿ ಸ್ಥಾನ ಖಚಿತ : ಶಾಸಕ ನಾರಾಯಣಸ್ವಾಮಿ
Kolar, Kolar | Nov 29, 2025 ಚಳಿಗಾಲದ ವಿಧಾನಸಭೆ ಅಧಿವೇಶನ ಮುಗಿದ ಬಳಿಕ ನಡೆಯಲಿರುವ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಖಚಿತವಾಗಿ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಮತ್ತು ಡಿಸಿಎಂ ನಡುವೆ ಗುದ್ದಾಟ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಳ್ಳಿಹಾಕಿ, ಇಬ್ಬರೂ ಒಂದಾಗಿ ಹೈಕಮಾಂಡ್ ಸೂಚನೆಗೆ ಬದ್ದರಾಗಿದ್ದಾರೆ ಎಂದು ಹೇಳಿದರು. ಕೋಲಾರ ಜಿಲ್ಲೆಯ ನಾಲ್ವರು ಶಾಸಕರಿಗೂ ಅವಕಾಶ ಸಿಗುವ ಸಾಧ್ಯತೆ ಇದ್ದು, ಯಾರಿಗೇ ಸಚಿವ ಸ್ಥಾನ ಸಿಕ್ಕರೂ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಸಹಕಾರಿ ಆಗಲಿದೆ ಎಂದು ಅಭಿಪ್ರಾಯಪಟ್ಟರು. ತಮ್ಮ ಹೆಸರೂ ಸ್ಪರ್ಧೆಯಲ್ಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ನಿರ್ಧಾರವನ್ನು ಹೈಕಮಾ