ಬೆಂಗಳೂರಿನಲ್ಲಿ ವಾಹನ ದಟ್ಟಣೆಯಿಂದ ಉಂಟಾಗುತ್ತಿರುವ ಮಾಲಿನ್ಯದ ಜೊತೆಗೆ, ಕಸ ಸುಡುವುದು ಕೂಡ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಕಸಕ್ಕೆ ಬೆಂಕಿ ಹಚ್ಚಿರುವುದರಿಂದ ಸುತ್ತಮುತ್ತಲಿನ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕೃತ್ಯ ಎಸಗುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.