ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದ ನಿಮಿತ್ತ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಸಂಗೀತ ಹಾಗೂ ಹಾಸ್ಯ ಕಾರ್ಯಕ್ರಮದಲ್ಲಿ ನೌಕರರು ಕುಣಿದು ಕುಪ್ಪಳಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ವೇದಿಕೆಯಲ್ಲಿ ಸಂಗೀತದ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕಿ ಗಮನ ಸೆಳೆದರು. ಕಲಾವಿದ ನಾಗರಾಜ ಜೋಗಿ ಸಂಗೀತದ ಸವಿ ಉಣಬಡಿಸಿದರೆ, ಕಲಾವಿದ ನವಲಿಂಗ ಪಾಟೀಲ ಹಾಸ್ಯದ ಹೊನಲು ಹರಿಸಿದರು