ಕಂಪ್ಲಿ: ಅರಳಹಳ್ಳಿ ಗ್ರಾಮದಲ್ಲಿ 16ಕೋಟಿ ರೂ.ವೆಚ್ಚದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ
Kampli, Ballari | Oct 30, 2025 ಅ.30, ಗುರುವಾರ ಮಧ್ಯಾಹ್ನ 1ಗಂಟೆಗೆ ಕಂಪ್ಲಿ ತಾಲೂಕಿನ ಅರಳಹಳ್ಳಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಶಾಸಕ ಜೆ.ಎನ್. ಗಣೇಶ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಎನ್. ಗಣೇಶ್ ರವರು, “ಈ ಶಾಲಾ ಕಟ್ಟಡವು ಸುಮಾರು ₹16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಬಡ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ದೊರೆಯಲಿದೆ,” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಗ್ರಾ