ಧಾರವಾಡ: ಧಾರವಾಡ ನಗರದ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ
ಧಾರವಾಡ ನಗರದ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ಮಾರುಕಟ್ಟೆ, ಟಿಕಾರೆ ರಸ್ತೆ, ಲೈನ್ ಬಜಾರ್ ರಸ್ತೆಗಳಲ್ಲಿ ದನಗಳು ರಸ್ತೆಯಲ್ಲೇ ಮಲಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸ್ಥಳೀಯ ವ್ಯಾಪಾರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.