ಸೇಡಂ: ಆರು ತಿಂಗಳಿಂದ ಕುಡಿಯುವ ನೀರಿಲ್ಲ: ಸೇಡಂ ಪಂಚಾಯಿತಿ ಮುಂದೆ ರಂಜೋಳ ಗ್ರಾಮಸ್ಥರ ಆಕ್ರೋಶ
ಸೇಡಂ ತಾಲೂಕಿನ ರಂಜೋಳ ಗ್ರಾಮದ ಕುಂಬಾರ ಬಡಾವಣೆಗೆ ಕಳೆದ ಆರು ತಿಂಗಳಿಂದ ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡಿದೆ. ಈ ಬಗ್ಗೆ ಗ್ರಾಮಸ್ಥರು ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ರಂಜೋಳ ಗ್ರಾಮಸ್ಥರು ಖಾಲಿ ಕೊಡಗಳೊಂದಿಗೆ ಸೇಡಂ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು.ಕೂಡಲೇ ನೀರು ಪೂರೈಕೆ ಮಾಡಬೇಕೆಂದು ಅವರು ಆಗ್ರಹಿಸಿದರು.. ಈ ಕುರಿತು ಶೆನಿವಾರ 7 ಗಂಟೆಗೆ ಸ್ಥಳಿಯರು ಮಾಹಿತಿ ನೀಡಿದ್ದಾರೆ.