ಚಳ್ಳಕೆರೆ:-ನಗರದ ನಾಗರಿಕರು ಪ್ರತಿವರ್ಷ ನಗರಸಭೆಗೆ ಕಂದಾಯ ಕಟ್ಟುತ್ತಿದ್ದರು ನಗರ ಸಭೆ ಅಧಿಕಾರಿಗಳು 31 ವಾರ್ಡ್ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ನಗರ ಸಭೆಯ ಆಡಳಿತಾಧಿಕಾರಿಗಳಾದ ಜಿಲ್ಲಾಧಿಕಾರಿಗಳ ಗೈರು ಹಾಜರಿಯಲ್ಲಿ ಪೌರಯುಕ್ತ ಜಗರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು ನಗರಸಭೆ ಅಧಿಕಾರಿಗಳ ವಿರುದ್ಧ ಏರು ಧ್ವನಿಯಲ್ಲಿ ಹರಿಹಾಯ್ದರು. ಕೆಆರ್ಎಸ್ ಪಕ್ಷದ ಮುಖಂಡ ನಗರಂಗೆರೆ ಮಹೇಶ್ ಮಾತನಾಡಿದರು.