ಯರಗಟ್ಟಿ: ಬೆಳಗಾವಿ: ತೋರಣಗಟ್ಟಿ ಗ್ರಾಮದಲ್ಲಿ ಕಾಣಿಸಿಕೊಂಡ ಕತ್ತೆಕಿರುಬ, ಗ್ರಾಮಸ್ಥರಲ್ಲಿ ಆತಂಕ
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಕತ್ತೆಕಿರುಬ ಕಾಣಿಸಿಕೊಂಡಿದೆ. ಹೊಲದಲ್ಲಿ ರೈತನಿಗೆ ಪ್ರಾಣಿ ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಕತ್ತೆಕಿರುಬವನ್ನು ಕಾಡಿಗೆ ಅಟ್ಟುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.