ಬಳ್ಳಾರಿ: ನಗರದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್ ಚಾಲನೆ
ಬಳ್ಳಾರಿ:ನಗರದ ಜಿಲ್ಲಾ ಪೊಲೀಸ್ ಕವಾಯತು ಡಿ.ಎ.ಆರ್ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನಡೆಯಲಿದ್ದು, ಬುಧವಾರ ಬೆಳಿಗ್ಗೆ 9ಗಂಟೆ ನಡೆದ ಕಾರ್ಯಕ್ರಮಕ್ಕೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್ ಅವರು ಚಾಲನೆ ನೀಡಿದರು. ಬಳ್ಳಾರಿ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಕರ್ತವ್ಯದ ವೇಳೆ ದೈಹಿಕ ಮತ್ತು ಮಾನಸಿಕ ಒತ್ತಡ ಸಹಜವಾಗಿದೆ. ಒತ್ತಡ ನಿವಾರಣೆಗೆ ಯಾವುದಾದರು ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು' ಹಾಗೂ ಕ್ರೀಡೆಯಲ್ಲಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದು ಎಂದು ಸಲಹೆ ನೀಡಿದರು.