ಮದ್ದೂರು: ಭಾರತೀನಗರದಲ್ಲಿ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದಿಂದ ಸೌಹಾರ್ದ ಸಾಮರಸ್ಯದ ನಡಿಗೆಗೆ ಚಾಲನೆ
Maddur, Mandya | Sep 22, 2025 ಮದ್ದೂರು ತಾಲ್ಲೂಕು ಭಾರತೀನಗರದಲ್ಲಿ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಸದಸ್ಯರು ಹಮ್ಮಿಕೊಂಡಿದ್ದ ಸೌಹಾರ್ದ ಸಾಮರಸ್ಯದ ನಡಿಗೆಗೆ ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ಚಾಲನೆ ನೀಡಿದರು. ನಂತರ ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೋಮುವಾದ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ, ದೇವರ ಹೆಸರಿನಲ್ಲಿ ಬಿಜೆಪಿ, , ಸಂಘಪರಿವಾರ, ಆರ್ ಎಸ್ ಎಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು. ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಮಾಡಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು. ಸಮಾಜದಲ್ಲಿ ಶಾಂತಿ ನೆಲಸಬೇಕು. ಎಲ್ಲ ಸಮುದಾಯದವರು ಸೌಹಾರ್ದವಾಗಿ ಬಾಳಬೇಕೆಂಬುವುದು ನಮ್ಮ ಉದ್ದೇಶವಾಗಿದೆ ಎಂದರು.