ಚಿಕ್ಕಮಗಳೂರು: ರಚನಾತ್ಮಕ ಟೀಕೆ ಟಿಪ್ಪಣಿಗಳ ಮೂಲಕ ಪತ್ರಿಕಾ ರಂಗ ಎಚ್ಚರಿಸುವ ಕೆಲಸ ಮಾಡ್ತಿದೆ : ನಗರದಲ್ಲಿ ಸಚಿವ ಜಾರ್ಜ್ ಹೇಳಿಕೆ
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಪರಿಗಣಿಸಲ್ಪಟ್ಟ ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ನಗರದ ಸ್ಕೌಟ್ ಭವನದಲ್ಲಿ ಪ್ರೆಸ್‌ಕ್ಲಬ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಚನಾತ್ಮಕ ಟೀಕೆ, ಟಿಪ್ಪಣಿಗಳ ಮೂಲಕ ರಾಜಕೀಯ ರಂಗ, ಆಡಳಿತ ವರ್ಗವನ್ನು ಎಚ್ಚರಿಸಿ ಸರಿದಾರಿಗೆ ತರುವ ಕೆಲಸವನ್ನು ಪತ್ರಿಕಾ ರಂಗ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು.ಪತ್ರಿಕಾ ವಲಯದಿಂದ ರಚನಾತ್ಮಕ ಟೀಕೆ, ಟಿಪ್ಪಣಿಗಳು ಆ ಕ್ಷಣಕ್ಕೆ ನೋವುಂಟು ಮಾಡಿದರು. ಅವುಗಳನ್ನು ಸಕರಾತ್ಮಕ ವಾಗಿ ತಗೆದುಕೊಳ್ಳುವುದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದರು.