ಸಕಲೇಶಪುರ: ಸಕಲೇಶಪುರ ಆಸ್ಪತ್ರೆಯಲ್ಲಿ 9 ವರ್ಷಗಳಿಂದ ಸ್ಕ್ಯಾನಿಂಗ್ ಮಿಷನ್ ಇಲ್ಲ: ಶಾಸಕರ ವಿರುದ್ಧ ಕಾಂಗ್ರೆಸ್ ಮುಖಂಡರ ಕಿಡಿ
ಸಕಲೇಶಪುರ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರದ ಕೊರತೆ ಬಗ್ಗೆ ಕಾಂಗ್ರೆಸ್ ಮುಖಂಡ ಡಿಸಿ ಸಣ್ಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 9 ವರ್ಷಗಳಿಂದ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯ ಇಲ್ಲದೆ ಬಡವರು ಪರದಾಡುವಂತಾಗಿದೆ. ಕ್ಷೇತ್ರದ ಅಭಿವೃದ್ಧಿಗಿಂತ ಹೊಂದಾಣಿಕೆ ರಾಜಕೀಯ ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.