ಚಿಕ್ಕಮಗಳೂರು: ಹಗರಣದ ಪ್ರಕರಣ ಮುಚ್ಚಿ ಹಾಕಲು ಸಿಎಂ ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ: ನಗರದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಟೀಕೆ
ಹಗರಣ ಪ್ರಕರಣ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ. ನಾನು ಹಗರಣ ಮಾಡಿದ್ದೀನಿ ನಿಮ್ದು ಹಗರಣ ತೆಗಿತೀನಿ ಎನ್ನುವ ವರಸೆಯಲ್ಲಿ ಮಾತನಾಡುತ್ತಿದ್ದು, ಸಿ.ಎಂ.ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಆಶ್ಚರ್ಯ ಮತ್ತು ಹಾಸ್ಯಾಸ್ಪದ ವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಟೀಕಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ವಾಲ್ಮೀಕಿ, ಮೂಡಾ ಹಗರಣ ಬರುವ ತನಕ ಬಿಜೆಪಿ ಹಗರಣ ಗೊತ್ತಿರಲಿಲ್ವಾ?, ನಿಮ್ಮದೆ ಸರ್ಕಾರ ಇರುವಾಗ ಇಲ್ಲಿಯವರೆಗೂ ಯಾಕೆ ತನಿಖೆ ಮಾಡಲಿಲ್ಲ. ನಿಮ್ಮ ಕಾಲಬುಡಕ್ಕೆ ಬಂದಾಗ ಬಿಜೆಪಿ ಬಗ್ಗೆ ಹೇಳುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.