ಗ್ರಾಮೀಣ ಭಾಗದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಶಿಕ್ಷಣದಿಂದ ಮಾತ್ರ ಗ್ರಾಮೀಣ ಭಾಗ ಅಭಿವೃದ್ಧಿ ಹೊಂದಲು ಸಾಧ್ಯ ಹಾಗಾಗಿ ಕೆ.ಕೆ.ಪ್ರ.ಅಭಿವೃದ್ಧಿ ಮಂಡಳಿಯಿಂದ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಹೆಚ್ಚಿನ ಅನುದಾನವನ್ನು ಮೀಸಲಿಡುವ ಮೂಲಕ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಹಾಗಾಗಿ ಕೆಕೆ ರ್ಡಿಬಿ ಯಿಂದ 50 ಲಕ್ಷ ರೂನಲ್ಲಿ 4 ಹೆಚ್ಚುವರಿ ಕೊಠಡಿಗಳು, ಮೈಕ್ರೋ ಅನುದಾನದಲ್ಲಿ 2 ಹೆಚ್ಚುವರಿ ಕೊಠಡಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 14.50 ಲಕ್ಷದಲ್ಲಿ 1 ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲಾಗಿದೆ ಎಂದರು.