ಬೆಂಗಳೂರು ಉತ್ತರ: ನಾರಾ ಭರತ್ ರೆಡ್ಡಿ ನನ್ನ ಮೇಲೆ ಫೈರಿಂಗ್ ಮಾಡಿದ್ದು ತನಿಖೆ ಸಿಬಿಐಗೆ ಯಾಕೆ ಕೊಡುತ್ತಿಲ್ಲ: ನಗರದಲ್ಲಿ ಜನಾರ್ಧನ ರೆಡ್ಡಿ ವಾಗ್ದಾಳಿ
ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಲ್ಲೇಶ್ವರಂ ಬಳಿ ಮೈಸೂರಿನಲ್ಲಿ ಸಿದ್ದರಾಮಯ್ಯ ಬಳ್ಳಾರಿ ವಿಚಾರ ಪ್ರಸ್ತಾಪಿಸಿರುವುದಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ ಅವರು , ನಾರಾ ಭರತ್ ರೆಡ್ಡಿ ಮತ್ತು ಅವರ ಬೆಂಬಲಿಗರು ತನ್ನ ಮೇಲೆ ಫೈರಿಂಗ್ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ನಾವು ಮೊದಲಿನಿಂದಲೂ ಒತ್ತಾಯಿಸುತ್ತಿದ್ದೇವೆ ಎಂದರು. ಆದರೆ ಸಿಎಂ ಈ ಪ್ರಕರಣವನ್ನು ಸಿಬಿಐಗೆ ಕೊಡದೆ ಸಿಐಡಿಗೆ ನೀಡಿರುವುದು ಅನುಮಾನಾಸ್ಪದ ಎಂದು ಹೇಳಿದರು. ಸಿಎಂಗೆ ಅವರ ಶಾಸಕರ ತಪ್ಪು ಗೊತ್ತಿರುವುದರಿಂದಲೇ ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.