ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮಂಗಳವಾರ ಬಸವೇಶ್ವರ ರಥೋತ್ಸವ ಅದ್ಧೂರಿಯಾಗಿ ಜರುಗಿತು. ರಥೋತ್ಸವದ ಹಿನ್ನೆಲೆ ತಾಲ್ಲೂಕಿನ ವಿವಿಧ ಭಾಗಗಳಿಂದ ಭಕ್ತರ ದಂಡು ಹರಿದು ಬಂದಿತ್ತು. ಇನ್ನೂ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹೆಚ್.ಪಿ.ರಾಜೇಶ್, ಎಸ್.ವಿ ರಾಮಚಂದ್ರ, ಸಂಸದ ಸಿದ್ದೇಶ್ವರ್ ಅವರ ಪುತ್ರ ಜಿ.ಎಸ್ ಅನಿತ್ ಕುಮಾರ್, ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಸೇರಿದಂತೆ ಗ್ರಾಮದ ಮುಖಂಡರು ಮತ್ತಿತರರಿದ್ದರು.