ಬೆಂಗಳೂರು ಉತ್ತರ: ಖ್ಯಾತ ರಂಗಕರ್ಮಿ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ
ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ೬೦ ವರ್ಷದ ಯಶವಂತ ಸರದೇಶಪಾಂಡೆ, ಸೋಮವಾರ ಬೆಳಗ್ಗೆ ೧೦ ಗಂಟೆಗೆ ನಿಧನರಾಗಿದ್ದಾರೆ. ಹೃದಯಾಘಾತವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟೀಸ್ ಆಸ್ಪತ್ರೆಗೆ ದಾಖಲಾದರೂ, ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಮಧ್ಯಾಹ್ನ ೧೨ ಗಂಟೆ ಸುಮಾರಿಗೆ ಅಧಿಕೃತವಾಗಿ ಆಸ್ಪತ್ರೆ ಬುಲಿಟಿನ್ ಬಿಡುಗಡೆ ಮಾಡಿದ್ದು, ನಿಧನದ ಸುದ್ದಿ ಖಚಿತಪಡಿಸಿದೆ. ಇತ್ತ ಯಶವಂತ ಸರದೇಶಪಾಂಡೆ ಅವರ ನಿಧನಕ್ಕೆ ಸ್ಯಾಂಡಲ್ವುಡ್ ಚಿತ್ರರಂಗ ಮಾತ್ರವಲ್ಲದೆ, ಕನ್ನಡ ಕಿರುತೆರೆ, ರಂಗಭೂಮಿ ಕಲಾವಿದರು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.