ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಕಿತ್ತೂರು ಪಟ್ಟಣದ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ ರಾತ್ರಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ 201ನೇ ವರ್ಷದ ಕಿತ್ತೂರು ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಿತ್ತೂರು ಚನ್ನಮ್ಮನವರ ಹೋರಾಟ ಹಾಗೂ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ. ಚನ್ನಮ್ಮನ ಹೋರಾಟ, ಸಾಹಸಗಾಥೆ ದೆಹಲಿ ತಲುಪಬೇಕಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು