ಅನಧಿಕೃತ ಕೀಟನಾಶಕ ಹಾಗೂ ರಸಗೊಬ್ಬರ ಮಳಿಗೆಗಳ ಮೇಲೆ ಕೃಷಿ ಇಲಾಖೆಯಿಂದ ದಾಳಿ ಮುಳಬಾಗಿಲು : ತಾಲೂಕಿನ ಎನ್.ವಡ್ಡಹಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ರಸಗೊಬ್ಬರ ಮಳಿಗೆಗಳ ಮೇಲೆ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ, ಉಪ ಕೃಷಿ ನಿರ್ದೇಶಕ ನಾಗರಾಜ್, ಮುಳಬಾಗಿಲು ಸಹಾಯ ಕೃಷಿ ನಿರ್ದೇಶಕ ಪ್ರಮೋದ್ ಬಾಬು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕ ಮುರಳಿ ಮತ್ತಿತರ ಅಧಿಕಾರಿಗಳ ತಂಡದಿಂದ ದಾಳಿ ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಕೀಟನಾಶಕ, ರಸಗೊಬ್ಬರವನ್ನು ಮಂಗಳವಾರ ವಶಪಡಿಸಿಕೊಳ್ಳಲಾಯಿತು.