ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಚಾಕು ಇರಿತ ಐವರಿಗೆ ಗಾಯ. ಲೋಕೇಶ್ ಬೆಟಗೇರಿ, ಮಹೇಶ್, ವಿನಾಯಕ ಹಾಗೂ ನಜೀರ್ ಪಠಾಣ್‌ಗೆ ಗಾಯಗಳಾಗಿದ್ದು, ಮೂವರನ್ನು ಬಿಮ್ಸ್ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಶನಿವಾರ ಐವರಿಗೆ ಚಾಕು ಇರಿತವಾಗಿದೆ. ಚನ್ನಮ್ಮ ವೃತ್ತದ ಬಳಿ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಪರಾರಿಯಾಗಿದ್ದಾರೆ