ವಿರಾಜಪೇಟೆ: ಕೊಡಗು-ಕೇರಳ ಗಡಿ ಭಾಗದಲ್ಲಿ ಹದಗೆಟ್ಟ ರಸ್ತೆ: ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ಎಚ್ಚರಿಕೆ
ಕೊಡಗಿನ ಕರಿಕೆ ಗ್ರಾಮದ ಚಂಬೇರಿ ಬಳಿ ಅಂತಾರಾಜ್ಯ ರಸ್ತೆ ಸಂಪೂರ್ಣ ಹದಗೆಟ್ಟಿದೆ. ನಾಲ್ಕು ವರ್ಷದ ಹಿಂದಷ್ಟೇ ನಿರ್ಮಿಸಿದ್ದ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿದ್ದು, ಶಾಶ್ವತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.