ಕಲಘಟಗಿ: ಮಿಶ್ರಿಕೋಟಿ ಗ್ರಾಮದ ಕುಡಿಯುವ ನೀರಿನ ಘಟಕದ ನೀರಿನ ಮಾದರಿ ಪರೀಕ್ಷೆ
ಕಲಘಟಗಿ : ಮಿಶ್ರಿಕೋಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಅಶುದ್ಧ ನೀರು ಸರಬರಾಜು ಆಗುತ್ತಿದೆ ಎಂಬ ಸಾರ್ವಜನಿಕ ದೂರಿನ ಬಗ್ಗೆ ಇಂದೇ ಪರಿಶೀಲಿಸಿ, ಸೂಕ್ತ ಕ್ರಮವಹಿಸಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶನ ನೀಡಿದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಮಿಶ್ರಿಕೋಟಿ ಗ್ರಾಮಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈಲರ್ಮಲ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.  ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈಲರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಪಿ. ರಜಪೂತ,ನೀರು ಪರೀಕ್ಷಾ ಸಮಯದಲ್ಲಿ ಇಲಾಖೆಯ ಸೆಕ್ಷನ್ ಅಧಿಕಾರ ಜಯದೀಪ್ ಪಾಟೀಲ, ಜೆಇ ಸುಜೀತ್, ಮಿಶ್ರಿಕೋಟಿ ಗ್ರಾಮಪಂಚಾಯತ ಕಾರ್ಯದರ್ಶಿ ಶಂಭುಲಿಂಗಪ್ಪ ಹೊಸಮನ