ಸೊರಬ: ರಾಜ್ಯ ಸರ್ಕಾರದ ವಿರುದ್ಧ ಸೊರಬದಲ್ಲಿ ರೈತರ ಪ್ರತಿಭಟನೆ
Sorab, Shimoga | Nov 5, 2025 ರಾಜ್ಯ ಸರ್ಕಾರದ ವಿರುದ್ಧ ಬುಧವಾರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ರೈತರು ಪ್ರತಿಭಟನೆಯನ್ನು ನಡೆಸಿದ್ದಾರೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸೊರಬ ತಾಲೂಕಿನ ಬಗರ್ ಹುಕುಂ ರೈತರನ್ನ ಒಕ್ಕಲುಬಿಸಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಮತ್ತು ಪಂಪ್ಸೆಟ್ ವಿದ್ಯುತ್ ನೀತಿ ಬದಲಿಸುತ್ತಿರುವುದನ್ನು ವಿರೋಧಿಸಿ ರೈತರು ಪ್ರತಿಭಟನೆಯನ್ನು ನಡೆಸಿದರು.ಈ ಪ್ರತಿಭಟನೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.