ಮುಳಬಾಗಿಲು: ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಶವವಾಗಿ ಪತ್ತೆ ಪ್ರಕರಣದಲ್ಲಿ ಟ್ವಿಸ್ಟ್
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯಲ್ಲಿ ಚೈತ್ರಾಬಾಯಿ ಹಾಗೂ ಧನ್ಯಬಾಯಿ ಸಾವಿಗೀಡಾಗಿದ್ದರು. ಅಕ್ಟೋಬರ್ -2 ರಂದು ನಾಪತ್ತೆಯಾಗಿದ್ದ ಬಾಲಕಿಯರು ಅಕ್ಟೋಬರ್ -4 ರಂದು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಶವವಾಗಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಸಾವಿನ ರಹಸ್ಯ ಬಯಲಾಗಿದೆ. ಬಾಲಕಿಯರಿಬ್ಬರೂ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು,ಕೌಟುಂಬಿಕ ಸಮಸ್ಯೆ ಹಿನ್ನೆಲೆ ಮನನೊಂದು ಬಾಲಕಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಗೂಡ ಸಾವಿನ ಬಗ್ಗೆ ಕುಟುಂಬಸ್ಥರು ಸಾಕಷ್ಟು ಅನುಮಾನ ವ್ಯಕ್ತಪಡಿಸಿದ್ದರು.ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು.ಸದ್ಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದಿದೆ.