ಕಲಬುರಗಿ : ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಅಂಗವಾಗಿ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಭಾಗವಹಿಸಿದ್ದರು.. ಜ5 ರಂದು ಬೆಳಗ್ಗೆ 11 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ, ಮೊಬೈಲ್, ಇಂಟರ್ನೆಟ್, ಸಾಮಾಜಿಕ ಜಾಲತಾಣದ ದುರುಪಯೋಗ ಬಗ್ಗೆ ವಿದ್ಯಾರ್ಥಿಗಳ ಜೊತೆ ನಾಗಲಕ್ಷ್ಮೀ ಚೌದರಿ ಸಂವಾದ ನಡೆಸಿದರು.. ಮುಂದೆ ಗುರಿ, ಹಿಂದೆ ಗುರು ಎನ್ನುವ ಸಿದ್ದಾಂತದ ಮೂಲಕ ಸರ್ಕಾರದಿಂದ ಸಿಗ್ತಿರೋ ಸೌಲಭ್ಯಗಳ ಬಗ್ಗೆ ಗಮನ ಹರಿಸಬೇಕೆಂದು ನಾಗಲಕ್ಷ್ಮೀ ಚೌದರಿ ಸಲಹೆ ನೀಡಿದರು.